ಶಿವಮೊಗ್ಗ : ಮನೆ ಸಮೀಪವೇ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪವನ್ನ ಸೆರೆಹಿಡಿಯುವಲ್ಲಿ ಉರಗ ತಜ್ಞ ಕಿರಣ್ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಣಗಲಕೊಪ್ಪದ 17 ನೇ ಮೈಲಿಗಲ್ಲು ಮನೆಯ ಮುಂಭಾಗಕ್ಕೆ ಬರೋಬ್ಬರಿ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಬಂದು ನಿಂತಿದ್ದು, ಮನೆಯೊಳಗೆ ನುಗ್ಗಲು ಯತ್ನಿಸಿತ್ತು. ಈ ದೃಶ್ಯವನ್ನು ಕಂಡ ಮನೆಯಲ್ಲಿದ್ದವರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದರು.
ಮನೆಯವರ ಕೂಗಾಟ ಕೇಳಿ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದು, ಪರಿಸ್ಥಿತಿಯನ್ನು ಗಮನಿಸಿದ ಅಕ್ಕ ಪಕ್ಕದ ನಿವಾಸಿಗಳು ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ನೇಕ್ ಕಿರಣ್ ಕುಮಾರ್ ಅವರನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಸ್ಥಳಕ್ಕೆ ಆಗಮಿಸಿದ ಕಿರಣ್ ಕುಮಾರ್ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿ ಕೊನೆಗೂ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು.
Subscribe to Updates
Get the latest creative news from FooBar about art, design and business.
