ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಬಳಿ ಕಾಮಗಾರಿ ವೇಳೆ ಕೈರ್ನ್ (ಕ್ರೇನ್) ಸಿಕ್ಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಳಿಗುಡಿ ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ನಾಗೇಶ್ ಅವರು ದೇವಸ್ಥಾನದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ನಿನ್ನೆ ಶಿವಮೊಗ್ಗಕ್ಕೆ ಬಂದಿದ್ದರು. ಇಂದು ಕೆಲಸ ಮಾಡುವ ವೇಳೆ ಕ್ರೇನ್‌ಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಕುರಿತು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು
Laborer dies after getting cairn near Dodamma temple
