Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ
ಪ್ರಮುಖ ಸುದ್ದಿ

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

light-vehicles-allowed-to-ply-at-hulikal-ghat-from-today-district-administration-order
Raghu ShettyBy Raghu ShettyJune 12, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ,: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿಯಷ್ಟು ಭೂಕುಸಿತ ಉಂಟಾಗಿತ್ತು. ರಸ್ತೆಯ ಮೇಲ್ಭಾಗದಲ್ಲೂ ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಮಾಸ್ತಿ ಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. ನಂತರದ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು-ಬದಲು (ಷಟಲ್ ಸರ್ವೀಸ್) ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಪ್ರಸ್ತುತ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವರದಿ ಮತ್ತು ಪ್ರಸ್ತಾವನೆಯನ್ನು ಪರಿಶೀಲಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ:
ಘಾಟಿ ರಸ್ತೆಯಲ್ಲಿ ತಡೆಗೋಡೆ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.
ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಹಾಕಲಾಗಿದೆ.
ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ‘ಕ್ಯಾಟ್ ಐ’ ಹಾಗೂ ಸೋಲಾರ್ ಸ್ಟಡ್ಸ್‌ಗಳನ್ನು ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ.
“ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ 116 ರನ್ವಯ ಈ ಹಿಂದೆ ವಿಧಿಸಲಾಗಿದ್ದ ಸಂಪೂರ್ಣ ವಾಹನ ಸಂಚಾರ ನಿಷೇಧದ ಆದೇಶವನ್ನು ರದ್ದುಗೊಳಿಸಲಾಗಿದೆ. ಜೂನ್ 12, 2026 ರಿಂದ ಜಾರಿಗೆ ಬರುವಂತೆ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಮೂಲಕ ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ” ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

June 11, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,311 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026385 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026352 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025292 Views
Don't Miss
Home

ಜೂನ್ 16: ಉದ್ಯೋಗ ನೇರ ಸಂದರ್ಶನ

By Raghu ShettyJune 12, 20260

ಶಿವಮೊಗ್ಗ, : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ…

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

June 11, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 20260 Views

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 20260 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.