Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಡೈರಿ ಸರ್ಕಲ್ ಬಳಿ ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್: ಹೊರತೆಗೆಯಲು ಹರಸಾಹಸ, ಸ್ಥಳೀಯರಲ್ಲಿ ಆತಂಕ
ನಮ್ಮ ಶಿವಮೊಗ್ಗ

ಡೈರಿ ಸರ್ಕಲ್ ಬಳಿ ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್: ಹೊರತೆಗೆಯಲು ಹರಸಾಹಸ, ಸ್ಥಳೀಯರಲ್ಲಿ ಆತಂಕ

LPG tanker stuck in mud near Dairy Circle
Raghu ShettyBy Raghu ShettyJune 4, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕಕ್ಕೆ ತೆರಳುತ್ತಿದ್ದ ಎಲ್‌ಪಿಜಿ (LPG) ಗ್ಯಾಸ್ ತುಂಬಿದ ಟ್ಯಾಂಕರ್ ಲಾರಿಯೊಂದು ನಗರದ ಡೈರಿ ಸರ್ಕಲ್ ಸಮೀಪ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಬುಧವಾರ ನಡೆದಿದೆ. ಗ್ಯಾಸ್ ತುಂಬಿದ ಟ್ಯಾಂಕರ್ ಸಿಲುಕಿರುವುದರಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಂಗಳೂರಿನಿಂದ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕದತ್ತ ಸಾಗುತ್ತಿದ್ದ ಟ್ಯಾಂಕರ್, ಡೈರಿ ಸರ್ಕಲ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಮಳೆಯಿಂದ ಉಂಟಾದ ಕೆಸರಿನಲ್ಲಿ ಸಿಲುಕಿಕೊಂಡಿದೆ. ಟ್ಯಾಂಕರ್ ಅನ್ನು ಹೊರತೆಗೆಯಲು ಕ್ರೇನ್ ಬಳಸಿ ಪ್ರಯತ್ನಿಸಿದರೂ ಆರಂಭಿಕ ಹಂತದಲ್ಲಿ ಯಶಸ್ಸು ದೊರಕಿಲ್ಲ ಎಂದು ತಿಳಿದುಬಂದಿದೆ.

ಸುರಕ್ಷತಾ ದೃಷ್ಟಿಯಿಂದ ಇಂಡೇನ್ ಕಂಪನಿಯ ಅಗ್ನಿಶಾಮಕ ವಾಹನವನ್ನು ಸ್ಥಳದಲ್ಲೇ ನಿಯೋಜಿಸಲಾಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ಯಾಸ್ ತುಂಬಿದ ಟ್ಯಾಂಕರ್ ಆಗಿರುವುದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ನಿಗಾ ವಹಿಸಿದ್ದಾರೆ.

ಮಾಚೇನಹಳ್ಳಿಯ ಇಂಡೇನ್ ರಿಫಿಲ್ಲಿಂಗ್ ಘಟಕದಿಂದ ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ ಸುಮಾರು ಹತ್ತು ಜಿಲ್ಲೆಗಳಿಗೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತದೆ. ಹೀಗಾಗಿ ಈ ಮಾರ್ಗದಲ್ಲಿ ಟ್ಯಾಂಕರ್‌ಗಳ ಸಂಚಾರ ನಿರಂತರವಾಗಿರುತ್ತದೆ.

ಡೈರಿ ಸರ್ಕಲ್ ಬಳಿಯ ಅಂಡರ್‌ಪಾಸ್ ಕಾಮಗಾರಿ ಕಳೆದ ಐದು ವರ್ಷಗಳಿಂದ ಪೂರ್ಣಗೊಳ್ಳದೇ ಇರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪೂರ್ಣ ಸರ್ವಿಸ್ ರಸ್ತೆ, ಮಳೆ ನೀರು ಹಾಗೂ ಕೆಸರು ಕಾರಣದಿಂದಾಗಿ ಈ ಪ್ರದೇಶದಲ್ಲಿ ಆಗಾಗ ವಾಹನಗಳು ಸಿಲುಕುವುದು ಮತ್ತು ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,308 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026329 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025284 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026278 Views
Don't Miss
ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.