ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಯಾವುದೇ ಪರಿಸರ ನಾಶವಗೊ ದಿಲ್ಲ. ಮುಂದಿನ ದಿನಗಳಲ್ಲಿ ವಿದ್ಯುತ್ ಅಭಾವನ್ನ ತಪ್ಪಿಸಲಿದೆ ಎಂದು ಕೆಪಿಸಿಎಲ್ ಅಧಿಕಾರಿ ಶಿಲ್ಪ ಕೆಪಿಸಿಎಲ್ ಸ್ಪಷ್ಟಪಡಿಸಿದರೂ
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕರ್ನಾಟಕ ರಾಜ್ಯವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಶರಾವತಿ ಕಣಿವೆಯಲ್ಲಿ ೨೦೦೦ ಮೆಗಾವ್ಯಾಟ್ ಸಾಮರ್ಥ್ಯ ದ ಪಂಪ್ ಸ್ಟೋರೇಜ್ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಪರಿಸರಕ್ಕೆ ಹೆಚ್ಚಿನ ಹಾನಿಯಾಗದೆ ಈ ಯೋಜನೆ ಯನ್ನು ಜಾರಿಗೊಳಿಸಲು ಕೆಪಿಸಿಎಲ್ ಎಲ್ಲಾ ರೀತಿಯ ಮುನ್ನೆ ಚ್ಚರಿಕಾ ಕ್ರಮಗಳನ್ನು ಕೈಗೊಂದು ಹೆಜ್ಜೆ ಇಡುತ್ತಿದೆ. ಪ್ರಸ್ತುತ ಪರಿಸರ ಸಂರಕ್ಷಣೆ ಜೊತೆಗೆ ಬೇಡಿಕೆಗೆ ಅನುಗುಣವಾಗಿ ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಈ ಯೋಜನೆ ಅನಿವಾರ್ಯ ಎಂದರು.
ಈ ಯೋಜನೆ ಜಾರಿ ವೇಳೆ ಈಗಾಗಲೇ ನಿರ್ಮಾಣವಾಗಿರುವ ಗೇರುಸೊಪ್ಪ ಮತ್ತು ತಲಕಳಲೆ ಅಣೆಕಟ್ಟೆಗಳನ್ನು ಬಳಸಿಕೊಳ್ಳುವ ಪರಿಣಾಮ ಹೊಸ ಅಣೆಕಟ್ಟೆ ಅವಶ್ಯಕತೆ ಇಲ್ಲ. ೨೦೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಅತೀ ಕಡಿಮೆ ಭೂಮಿ ಬಳಕೆ ಮಾಡಿಕೊ ಳ್ಳುತ್ತಿರುವುದು ಶರಾವತಿ ಪಿಎಸ್‌ಪಿ ಯೋಜನೆಯ ಮಹತ್ವದ ಅಂಶವಾಗಿದೆ. ಈ ಯೋಜನೆಯಡಿ ಕೇವಲ ೧೦೦.೬೪೫ ಹೆಕ್ಟೇರ್ ಪ್ರದೇಶ (೨೪೮.೭ ಎಕರೆ ಪ್ರದೇಶ)ವನ್ನು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಈ ಪೈಕಿ ೫೪.೧೫೫ ಹೆಕ್ಟೇರ್ ಅರಣ್ಯ ಪ್ರದೇಶವಾಗಿದ್ದರೆ, ೪೬.೪೯ ಹೆಕ್ಟೇರ್ ಅರಣೇತರ ಪ್ರದೇಶವಾಗಿದೆ. ಅರಣ್ಯ ಪ್ರದೇಶ ಬಳಕೆ ವೇಳೆ ಕೈಗೊಳ್ಳಲಾ ಗುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೆಪಿಸಿ ಕೈಗೊಳ್ಳಲಿದೆ ಮತ್ತು ಈ ಬಗ್ಗೆ ಅರಣ್ಯ ಇಲಾಖೆ, ವನ್ಯಜೀವಿ ಮಂಡಳಿಗಳೂ ಸಹ ಸೂಕ್ತ ಸಮಯದಲ್ಲಿ ಮೇಲುಸ್ತು ವಾರಿ, ಪರಿಶೀಲನೆ, ಪರಾಮರ್ಶೆ ನಡೆಸ ಲಿವೆ. ಅರಣ್ಯ ಪ್ರದೇಶಕ್ಕೆ ಸಂಬಂ ಧಿಸಿದಂತೆ ಕೆಪಿಸಿ ಪರ್ಯಾಯ ಅರಣ್ಯ ಪುನರ್ ಸ್ಥಾಪಿಸಲು ಅರಣ್ಯ ಇಲಾಖೆಗೆ ಸ್ವಾಧೀನದಷ್ಟೇ ಅರಣೇತರ ಪ್ರದೇಶ ಹಾಗು ಅರಣ್ಯ ಪುನರ್ ಸ್ಥಾಪನೆಗೆ ತಗಲುವ ವೆಚ್ಚವನ್ನೂ ಭರಿಸುತ್ತಿದೆ. ಯೋಜನೆ ವ್ಯಾಪ್ತಿಯಲ್ಲಿ ಮರಗಳನ್ನು ಗುರುತಿಸಲಾಗಿದೆಯಾದರೂ ಅಗತ್ಯ ಇದ್ದರೆ ಮಾತ್ರ ಕಡಿಯಲಾಗುತ್ತದೆ,
ಬಹುಪಾಲು ರಚನೆಗಳು ಸುರಂಗದ ಒಳಗೆ ಇರುವುದರಿಂದ ಭೂಮಿಯ ಮೇಲ್ಮನಲ್ಲಿ ಕನಿಷ್ಠ ಪರಿಣಾಮ ಉಂಟಾಗುತ್ತದೆ. ಭೂಮಿಯ ಆಳದಲ್ಲಿ ಟನಲ್ (ಸುರಂಗ) ಮೂಲಕ ನೀರನ್ನು ಹರಿಬಿಡುವ ಮತ್ತು ಅದೇ ಟನಲ್ ಮೂಲಕ ನೀರನ್ನು ಎತ್ತುವಳಿ ಮಾಡುವ ಪರಿಣಾಮ ಸುರಂಗ ನಿರ್ಮಾಣದ ಭೂಮಿಯ ಮೇಲ್ಮನಲ್ಲಿ ಇರುವ ಮರ-ಗಿಡ-ಪರಿಸರಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಕಾಮಗಾರಿ ವೇಳೆ ಪ್ರಸ್ತುತ ಇರುವ ರಸ್ತೆಯನ್ನೇ ಬಳಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿ ದ್ದು, ಪ್ರಸ್ತುತ ೩.೫ ಮೀಟರ್ ಇರುವ ಈ ರಸ್ತೆಯನ್ನು ಅಗತ್ಯ ವಸ್ತುಗಳ ರವಾನೆಗೆ ಅನುವಾಗುವಂತೆ ೫.೫ ಮೀಟರ್ ವಿಸ್ತರಿಸಲು ಯೋಜಿ ಸಲಾಗಿದೆ ಎಂದರು.
ಭೂಮಿಯ ಒಳಗೆ ಪಂಪ್ ಹೌಸ್ ಸೇರಲು ಸುರಂಗ ಪ್ರವೇಶಿಸುವ ಸ್ಥಳದಲ್ಲಿ ಮಾತ್ರ ಅಲ್ಪ ಪ್ರಮಾಣದ ಅರಣ್ಯ ಪ್ರದೇಶ ಬಳಕೆ ಮಾಡಿಕೊಳ್ಳಲಾಗುವುದು. ಯೋಜನೆ ಪೂರ್ಣಗೊಂಡ ನಂತರ ಸುರಂಗದ ಪ್ರವೇಶ ದ್ವಾರದ ಸುತ್ತಮುತ್ತ ಅರಣ್ಯ ಪುನರ್ ನಿರ್ಮಾಣವಾಗಲಿದೆ. ಈ ಸಂಬಂಧ ಈಗಾಗಲೇ ರಾಜ್ಯ ಅರಣ್ಯ ಇಲಾಖೆ, ಕೇಂದ್ರ ಅರಣ್ಯ ಇಲಾಖೆ ಹಲವು ಭಾರಿ ಸ್ಥಳ ಪರಿಶೀಲನೆ ನಡೆಸಿ ಕನಿಷ್ಠ ಗಿಡ-ಮರಗಳ ಕಡಿದು ಯೋಜನೆ ಜಾರಿ ಮಾಡಲು ಕ್ರಮವಹಿಸಿವೆ ಎಂದರು.
ಪಂಪ್ಸ್ ಸ್ಟೋರೇಜ್ ಯೋಜನೆಗೆ ಈಗಾಗಲೇ ಕೇಂದ್ರ ವಿದ್ಯುತ್ ಪ್ರಾಧಿಕಾರ ಅನುಮತಿ ನೀಡಿದೆ. ಈ ಪ್ರಾಧಿಕಾರವು ಅನುಮತಿ ನೀಡುವ ಮೊದಲು ೧೩ ನಿರ್ದೇಶನಾಲಯಗಳಿಂದ ಅಭಿಪ್ರಾಯ ಸಂಗ್ರಹಣೆ ಮಾಡಿತ್ತು. ಈ ನಿರ್ದೇಶನಾಲಯಗಳು ಯೋಜನೆಯಿಂದ ಭೂಕುಸಿತ, ಭೂಕಂಪದಂತಹ ಅಪಾಯಗಳು ಉದ್ಭವವಾಗುವುದಿಲ್ಲ, ಜೀವ ವೈವಿದ್ಯತೆಗೆ ಸಮಸ್ಯೆಯಾಗುವುದಿಲ್ಲ, ಭೂಮಿಯ ಸ್ಥಿರತೆ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂಬುದನ್ನು ವೈಜ್ಞಾನಿಕವಾಗಿ ತಿಳಿದುಕೊಂಡು ವರದಿ ನೀಡಿದ ಬಳಿಕವೇ ಯೋಜನೆಗೆ ಅನುಮತಿ ನೀಡಲಾಗಿರುತ್ತದೆ ಎಂದರು.
ಈಗಾಗಲೇ ವನ್ಯ ಜೀವಿಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಿದ್ದಲ್ಲದೆ, ರಚನಾತ್ಮಕವಾಗಿ ಭೂಮಿಯ ಸ್ಥಿರತೆಗೆ ಯಾವುದೇ ಧಕ್ಕೆ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲಾಗಿತ್ತು.
ಇದರ ಆಧಾರದ ಮೇಲೆ ವನ್ಯಜೀವಿ ಇಲಾಖಾಧಿಕಾರಿಗಳು ಪ್ರತ್ಯೇಕವಾಗಿ ಪರಿಶೀಲಿಸಿದ ಬಳಿಕ ಯೋಜನೆ ಯನ್ನು ಮೇಲ್ಮಟ್ಟದಲ್ಲಿರುವ ವನ್ಯಜೀವಿ ಮಂಡಳಿ ಮುಂದೆ ಮಂಡಿಸಲಾಗಿತ್ತು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿದ ಬಳಿಕ ರಾಜ್ಯ ಮನ್ಯಜೀವಿ ಮಂಡಳಿ ಮತ್ತು ಕೇಂದ್ರ ವನ್ಯಜೀವಿ ಮಂಡಳಿಗಳು ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿವೆ ಎಂದರು.
ಯೋಜನೆ ಅನುಷ್ಠಾನ ಸಂದರ್ಭದಲ್ಲಿ ಅರಣ್ಯ ಇಲಾಖೆ, ಅರಣ್ಯ ಸಚಿವಾಲಯ, ಪರಿಸರ ಇಲಾಖೆಗಳು ನಿಗದಿಪಡಿಸುವ ಮಾನದಂಡದಡಿ ಕಾರ್ಯಾಚರಣೆ ನಡೆಸಲಾಗುತ್ತದೆ. ಕೇಂದ್ರ ಅರಣ್ಯ ಸಚಿವಾಲಯದ ನಿಯಮಗಳು ಮತ್ತು ಉಲ್ಲೇಖಗಳನ್ವಯ ಅಧ್ಯಯನ ನಡೆಸಲಾಗಿದೆ. ಈ ವರದಿ ಆಧರಿಸಿ ಅರಣ್ಯ ಇಲಾಖೆ ಮತ್ತು ಪರಿಸರ ಇಲಾಖೆಯ ನಿಯಮಗಳಂತೆ ಯೋಜನೆ ಅನುಷ್ಠಾನದ ವೇಳೆ ಉಪಶಮನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಶರಾವತಿ ಪಿಎಸ್ಪಿ ಯೋಜನೆ ಜಾರಿ ಪ್ರದೇಶದಲ್ಲಿ ಅಪರೂಪದ ಸಿಂಗಳೀಕಗಳು ಸಂಚರಿಸುತ್ತವೆ ಎಂದು ಅರಣ್ಯ ಇಲಾಖೆಯು ತಿಳಿಸಿದೆ. ಇವರುಗಳ ಸಂಚಾರಕ್ಕೆ ನಹ ತೊಡಕಾಗದಂತೆ ಕ್ರಮ ವಹಿಸಲು ಕೆಪಿಸಿ ಮುಂದಾಗಿದೆ. ಯೋಜನೆ ಜಾರಿ ವೇಳೆ ಅರಣ್ಯ ಇಲಾಖೆ ನೇತೃತ್ವದಲ್ಲಿ ಸಿಂಗಳೀಕಗಳ ಸಂಚಾರಕ್ಕೆ ಯಾವುದೇ ಬಾದಕ ಆಗಂದಂತೆ ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆ ಅನುಸರಿಸಲಾಗಿದ್ದ ಮೇಲೇತುವೆ (ಟ್ರೇ ಕ್ಯಾನೋಪಿ)ಗಳನ್ನು ಅರಣ್ಯ ಇಲಾಖೆ, ಸೂಚನೆ, ಮಾರ್ಗ ದರ್ಶನ ಮತ್ತು ಮೇಲುಸ್ತುವಾ ರಿಯಲ್ಲಿ ನಿರ್ಮಾಣ ಮಾಡುವ ಷರತ್ತಿನೊಂದಿಗೆ ಕೆಪಿಸಿ ಯೋಜನೆ ಜಾರಿಗೆ ಮುಂದಾಗಿದೆ ಎಂದರು.
