ಶಿವಮೊಗ್ಗ: ಮೇ.೪ ರಂದು ಪೂರ್ವ ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಮಂಜುನಾಥ್ ಮತ್ತು ಸಿಪಿಸಿ ಸಂತೋಷ್ ನಗರದ ಗಾಂಧಿ ಬಜಾರ್ ಪ್ರದೇಶದಲ್ಲಿ ಸಂಚಾರ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೆ ಸಂಚಾರ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನವನ್ನು ಚಲಾಯಿಸುತ್ತಿದ್ದ ಸವಾರನನ್ನು ಗಮನಿಸಿ, ತಡೆದು ನಿಲ್ಲಿಸಲು ಸೂಚಿಸಿದ ವೇಳೆ ಬೈಕ್ ಸವಾರ ಸಯ್ಯದ್ ಮುಜಾಮಿಲ್ ರಸ್ತೆ ಮಧ್ಯೆ ವಾಹನವನ್ನು ನಿಲ್ಲಿಸಿ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆ ಪೊಲೀಸರು ತಿಳಿಸುತ್ತಿದ್ದಾಗ, ಅಲ್ಲಿಗೆ ಬಂದ ಜಬಿವುಲ್ಲಾ ಎಂಬ ಮತ್ತೊಬ್ಬ ವ್ಯಕ್ತಿ “ನಾವು ಹೆಲ್ಮೆಟ್ ಹಾಕುವುದಿಲ್ಲ, ಏನು ಮಾಡುತ್ತೀಯ?” ಎಂದು ಹೇಳಿ ಇಬ್ಬರೂ ಸೇರಿ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಪೊಲೀಸ್ ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ತಳ್ಳಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿ, ಬೈಕ್ ಕೀ ಕಿತ್ತುಕೊಂಡು ಬೆದರಿಕೆ ಹಾಕಿ ವಾಹನವನ್ನು ತೆಗೆದುಕೊಂಡು ಹೋಗಿರುವುದು ವರದಿ ಅಡಿಯಲ್ಲಿ ಪ್ರಕರಣ ದಾಖಸಿಕೊಂಡು. ಇಬ್ಬರೂ ಆರೋಪಿತರನ್ನು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
