Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಎಸ್.ಎನ್. ಚನ್ನಬಸಪ್ಪ
Home

ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಎಸ್.ಎನ್. ಚನ್ನಬಸಪ್ಪ

Permanent solution to the problem
Raghu ShettyBy Raghu ShettyJune 9, 2026Updated:June 9, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
http://a1suddi.com/wp-content/uploads/2026/06/mla.mp4

ಶಿವಮೊಗ್ಗ, : ನಗರದ ಪ್ರತಿಯೊಂದು ಬಡಾವಣೆಯ ನಾಗರಿಕರಿಗೂ ಶುಚಿತ್ವ ಹಾಗೂ ಮಾಲಿನ್ಯಮುಕ್ತ ವಾತಾವರಣ ಕಲ್ಪಿಸುವುದು ತಮ್ಮ ಆದ್ಯತೆಯಾಗಿದ್ದು, ಸಾರ್ವಜನಿಕರನ್ನು ದೀರ್ಘಕಾಲದಿಂದ ಕಾಡುತ್ತಿರುವ ಒಳಚರಂಡಿ (UGD) ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ತಿಳಿಸಿದ್ದಾರೆ.
ನಗರದ ವಾರ್ಡ್ ನಂ. 6ರ ಬಸವಣ್ಣ ಲೇಔಟ್‌ಗೆ ಮಂಗಳವಾರ ಭೇಟಿ ನೀಡಿದ ಅವರು, ಬಡಾವಣೆಯ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಒಳಚರಂಡಿ ವ್ಯವಸ್ಥೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿ, UGD ವ್ಯವಸ್ಥೆಯ ದೋಷಗಳು, ನೀರು ನಿಂತುಕೊಳ್ಳುವುದು, ದುರ್ವಾಸನೆ ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಶಾಸಕ ಚನ್ನಬಸಪ್ಪ, ಬಸವಣ್ಣ ಲೇಔಟ್‌ನಲ್ಲಿನ ಒಳಚರಂಡಿ ಸಮಸ್ಯೆ ಸಾರ್ವಜನಿಕರ ಆರೋಗ್ಯ ಹಾಗೂ ನೆಮ್ಮದಿಗೆ ಧಕ್ಕೆಯುಂಟುಮಾಡುತ್ತಿರುವ ಗಂಭೀರ ವಿಷಯವಾಗಿದೆ. ಆದ್ದರಿಂದ ಕೇವಲ ತಾತ್ಕಾಲಿಕ ದುರಸ್ತಿ ಕಾರ್ಯಗಳಿಗೆ ಸೀಮಿತವಾಗದೆ, ಸಮಸ್ಯೆಯ ಮೂಲ ಕಾರಣಗಳನ್ನು ಪತ್ತೆಹಚ್ಚಿ ವೈಜ್ಞಾನಿಕ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.
ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಒಳಚರಂಡಿ ವಿಭಾಗದ ತಾಂತ್ರಿಕ ತಜ್ಞರೊಂದಿಗೆ ಜಂಟಿ ಸ್ಥಳ ಪರಿಶೀಲನೆ ನಡೆಸಲಾಗುವುದು. ಬಳಿಕ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಅಗತ್ಯ ಕಾಮಗಾರಿಗಳನ್ನು ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಸ್ಥಳೀಯರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ನಾಗರಿಕರ ಕುಂದುಕೊರತೆಗಳಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ವಾರ್ಡ್‌ನ ಪ್ರಮುಖರು, ಸ್ಥಳೀಯ ಮುಖಂಡರು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದು, ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಶಾಸಕರ ಭೇಟಿ ಹಾಗೂ ಸಮಸ್ಯೆ ಪರಿಹಾರಕ್ಕೆ ನೀಡಿದ ಭರವಸೆಯನ್ನು ಸ್ಥಳೀಯರು ಸ್ವಾಗತಿಸಿದರು.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,311 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026391 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026353 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025294 Views
Don't Miss
Home

ಜೂನ್ 16: ಉದ್ಯೋಗ ನೇರ ಸಂದರ್ಶನ

By Raghu ShettyJune 12, 20260

ಶಿವಮೊಗ್ಗ, : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ…

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

June 11, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.