Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

July 29, 2026

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಯುವತಿಯ ಸರ ಕಳವು ಪ್ರಕರಣ ಭೇದಿಸಿದ ಗ್ರಾಮಾಂತರ ಪೊಲೀಸರು ; ಆರೋಪಿ ಬಂಧನ : ಕಾರು ಹಾಗೂ 1.50 ಲಕ್ಷ ಮೌಲ್ಯದ ಬಂಗಾರದ ಸರ ವಶ
ಅಪರಾಧ ಲೋಕ

ಯುವತಿಯ ಸರ ಕಳವು ಪ್ರಕರಣ ಭೇದಿಸಿದ ಗ್ರಾಮಾಂತರ ಪೊಲೀಸರು ; ಆರೋಪಿ ಬಂಧನ : ಕಾರು ಹಾಗೂ 1.50 ಲಕ್ಷ ಮೌಲ್ಯದ ಬಂಗಾರದ ಸರ ವಶ

Rural police crack case of theft of young woman's necklace
Raghu ShettyBy Raghu ShettyMay 23, 2026Updated:May 23, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ, : ಅಬ್ಬಲಗೆರೆಯ ಸಮೀಪ ನಡೆದ ಯುವತಿಯೊಬ್ಬರ ಸರ ಕಳವು ಮಾಡಿದ ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮೇ.೨೨ ರ ಸಂಜೆ ಯುವತಿಯೊಬ್ಬರು ಕಾರಿಂದ ಕೆಳಗೆ ಇಳಿಯುತ್ತಿದ್ದ ವೇಳೆ, ಹಿಂಭಾಗದಿಂದ ಇಕೋ ಸ್ಪೋರ್ಟ್ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು ಯುವತಿಯ ಕೊರಳಿನಲ್ಲಿದ್ದ ಬಂಗಾರದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆ, ಆರೋಪಿಗಳ ಪತ್ತೆ ಹಾಗೂ ಮಾಲು ವಶಕ್ಕೆ ವಿಶೇಷ ತಖಾ ತಂಡವನ್ನು ರಚಿಸಿತು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಖಿಲ್ ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ.ಜಿ ಹಾಗೂ ಉಪ ವಿಭಾಗ-ಬಿ ಡಿವೈಎಸ್‌ಪಿ ಸಂಜೀವ್ ಕುಮಾರ್ ಟಿ ಅವರ ಮಾರ್ಗದರ್ಶನದಲ್ಲಿ ಪಿಐ ರಾಘವೇಂದ್ರ ಕಾಂಡಿಕೆ ಹಾಗೂ ಪಿಎಸ್‌ಐ ನವೀನ್ ಮಠಪತಿ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.
ತಖಾ ತಂಡದಲ್ಲಿ ಸಿಪಿಸಿ ಶ್ರೀಕಾಂತ್, ಕಾಶಿನಾಥ ಹಾಗೂ ಕವನ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆಯ ವೇಳೆ ಆರೋಪಿ ಮಂಜುನಾಥನಾಯ್ಕನನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಸುಮಾರು ೫ ಲಕ್ಷ ರೂ. ಮೌಲ್ಯದ ಕಾರು ಹಾಗೂ ಸುಮಾರು 1.50 ಲಕ್ಷ ರೂ. ಮೌಲ್ಯದ  ಗ್ರಾಂ ತೂಕದ ಬಂಗಾರದ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

July 29, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,326 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,276 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026386 Views
Don't Miss
Home

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

By Raghu ShettyJuly 29, 20260

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿ.ಎ.) ಎಂದು ಸುಳ್ಳು ಪರಿಚಯ ಮಾಡಿಕೊಂಡು ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್…

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.