Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಉದ್ಯೋಗ ಮಾಹಿತಿ»ಸ್ವ-ಉದ್ಯೋಗ ತರಬೇತಿ
ಉದ್ಯೋಗ ಮಾಹಿತಿ

ಸ್ವ-ಉದ್ಯೋಗ ತರಬೇತಿ

Raghu ShettyBy Raghu ShettySeptember 25, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ
ಶಿವಮೊಗ್ಗ, : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ.06/10/2025 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಶಿಬಿರಾರ್ಥಿಗಳು ಸೆ. 30 ರಂದು ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8970476050, 9591514154, 9686248369, 8970446644, 9505894247 ಗಳನ್ನು ಸಂಪರ್ಕಿಸುವುದು .
—————
ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯು ಯುವನಿಧಿ ಫಲಾನುಭವಿಗಳಿಗೆ ಸಿಎಂಕೆಕೆವೈ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್, ಮೋಕ್ಷಗುಂಡA ಮತ್ತು ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಗಳ ಮುಖಾಂತರ ತರಬೇತಿ ನೀಡಲಾಗುತ್ತಿದ್ದು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ ಮೂಲಕ ನೊಂದಾಯಿಸಿಕೊಳ್ಳುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
——————-

ಶಿವಮೊಗ್ಗ, : “ವೀರ್ ಪರಿವಾರ್ ಸಹಾಯತಾ ಯೋಜನಾ 2025” ರ ಅಡಿಯಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ್ರ (ಕ್ಲಿನಿಕ್)ವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿ, ಬಾಲರಾಜ್ ಅರಸ್ ರಸ್ತೆ, ಶಿವಮೊಗ್ಗ ಇಲ್ಲಿ ಆರಂಭಿಸಲಾಗಿದೆ.
ರಕ್ಷಣಾ ಇಲಾಖೆಯ ಸಿಬ್ಬಂದಿಗಳು, ವೀರ ನಾರಿಯರು, ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಉಂಟಾಗಬಹುದಾದ ಕಾನೂನು ಸಮಸ್ಯೆಗಳಿಗೆ ನೆರವು ಮತ್ತು ಅರಿವುಗಳನ್ನು ಉಚಿತವಾಗಿ ನೀಡುವ ಯೋಜನೆ ಇದಾಗಿದ್ದು, ಈ ಯೋಜನೆಯ ಸುಗಮ ಅನುಷ್ಠಾನಕ್ಕಾಗಿ ನ್ಯಾಯಾಧೀಶ ಅಡ್ವಕೇಟ್ ಜನರಲ್ (ಜೆ.ಎ.ಜಿ) ಇಲಾಖೆಯಿಂದ ಆನ್ ಲೈನ್ ತರಬೇತಿ ನೀಡಲಾಗುತ್ತಿದ್ದು, ಪ್ಯಾರಾ-ಲೀಗಲ್-ಸ್ವಯಂಸೇವಕರ ತರಬೇತಿಯನ್ನು ಒರಿಯಂಟೇಶನ್-ಇAಡಕ್ಷನ್-ರೆಪ್ರೆಶರ್ ಕೋರ್ಸ್ಗಳಿಗೆ ಮೃತ ರಕ್ಷಣಾ ಸಿಬ್ಬಂದಿ ಪತ್ನಿಯರು, ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಹಾಗೂ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ರಕ್ಷಣಾ ಸಿಬ್ಬಂದಿಯ ಪತ್ನಿಯರು ಅಥವಾ ಅವರ ವಯಸ್ಕ ಮಕ್ಕಳುಗಳು ಪಡೆಯಬಹುದಾಗಿದೆ.
ಈ ಯೋಜನೆಯ ತರಬೇತಿ ಪಡೆದು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಇಚ್ಛೆಯುಳ್ಳ ಮೃತ ರಕ್ಷಣಾ ಸಿಬ್ಬಂದಿ ಪತ್ನಿಯರು, ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಹಾಗೂ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ರಕ್ಷಣಾ ಸಿಬ್ಬಂದಿಯ ಪತ್ನಿಯರು ಅಥವಾ ಅವರ ವಯಸ್ಕ ಮಕ್ಕಳುಗಳು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿ ತಮ್ಮ ಹೆಸರನ್ನು ನೋಂದಯಿಸಿಕೊಳ್ಳಬಹುದಾಗಿಯೆAದು ಉಪನಿರ್ದೇಶಕರು(ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 08182 220925ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
——————-

shivamoga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಗಾಂಧಿ ಪಾರ್ಕ್ ಅಭಿವೃದ್ಧಿಗೆ ವೇಗ : ಒಂದು ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸುವ ಗುರಿ

February 20, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,293 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026260 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025248 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025206 Views
Don't Miss
ಪ್ರಮುಖ ಸುದ್ದಿ

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

By Raghu ShettyFebruary 28, 20260

ಶಿವಮೊಗ್ಗ, : ನಗರದ ಪ್ರಸಿದ್ಧ ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದೇವಿಯನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿ ಮೆರವಣಿಗೆಯೊಂದಿಗೆ…

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026

ಕೋಟೆ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ದತೆ

February 23, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.