ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಹತ್ಯೆ
ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ
ಶಿವಮೊಗ್ಗ: ನಗರದ ಊರಗಡೂರಿನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿರುವ ದುರ್ಘಟನೆ ಸೋಮವಾರ ನಡೆದಿದೆ.
ಮೃತ ವಿದ್ಯಾರ್ಥಿ ಊರಗಡೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದನು. ಪರೀಕ್ಷೆ ಹಿನ್ನೆಲೆ ನಡೆಯುತ್ತಿದ್ದ ವಿಶೇಷ ತರಗತಿಗೆ ಹಾಜರಾಗಿ ಮನೆಗೆ ತೆರಳುತ್ತಿದ್ದ ವೇಳೆ ಶಾಲೆಯಿಂದ ಅನತಿ ದೂರದಲ್ಲಿ 3–4 ಅಪ್ರಾಪ್ತ ಬಾಲಕರ ಗುಂಪು ಹಲ್ಲೆ ನಡೆಸಿದರೆಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲಿದ್ದ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಿದರು. ಪ್ರಕರಣ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಘಟನೆಯ ಹಿನ್ನೆಲೆಯಲ್ಲಿ ನಗರಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
Subscribe to Updates
Get the latest creative news from FooBar about art, design and business.
