Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಎಸ್ ಎಸ್ ಎಲ್ ಸಿ ಯಲ್ಲಿ ಜಿಲ್ಲೆಗೆ ಶೇ.96.56 ಫಲಿತಾಂಶ
ನಮ್ಮ ಶಿವಮೊಗ್ಗ

ಎಸ್ ಎಸ್ ಎಲ್ ಸಿ ಯಲ್ಲಿ ಜಿಲ್ಲೆಗೆ ಶೇ.96.56 ಫಲಿತಾಂಶ

The district achieved 96.56% results in SSLC.
Raghu ShettyBy Raghu ShettyApril 23, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  ಜಿಲ್ಲೆಯು ಒಟ್ಟಾರೆ ಶೇ. 96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.  ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ತಾಲ್ಲೂಕುವಾರು ಸಾಧನೆ:
ತಾಲ್ಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕು ಶೇ. 99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಸಾಗರ ಶೇ. 99.01 ಮತ್ತು ಹೊಸನಗರ ಶೇ. 98.90 ಫಲಿತಾಂಶದೊಂದಿಗೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ. ಉಳಿದಂತೆ ಸೊರಬ ಶೇ. 96.77, ಶಿವಮೊಗ್ಗ ಶೇ. 96.55, ಶಿಕಾರಿಪುರ ಶೇ. 94.79 ಹಾಗೂ ಭದ್ರಾವತಿ ಶೇ. 94.00 ಫಲಿತಾಂಶ ದಾಖಲಿಸಿವೆ.

ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ಅನಘ ಕೆ.ಎಸ್. 624 ಅಂಕ ಗಳಿಸಿ ಮುಂಚೂಣಿಯಲ್ಲಿದ್ದಾರೆ. ಶಿವಮೊಗ್ಗದ ಪ್ರಿಯದರ್ಶಿನಿ ಪ್ರೌಢಶಾಲೆಯ ಕೃತಿ ಪಿ.ಎಸ್. 623 ಅಂಕ, ಭದ್ರಾವತಿಯ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಅಕುಲ್ ವಿಷ್ಣು ಭಟ್ 622 ಅಂಕ ಮತ್ತು ಶಿಕಾರಿಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೇಶವ ಜಿ. 622 ಅಂಕ, ವಿಕಾಸ್ ಪ್ರೌಢಶಾಲೆಯ ಚಿತ್ಸುಕಿ ಆರ್ ನಾಡಿಗ್ 621, ನವಜ್ಯೋತಿಬಿಂಗ್ಲಿಷ್ ಪ್ರೌಢಶಾಲೆಯ ದೇವಿ ಪ್ರಸಾದ್ ಹೆಚ್ ಯು 621, ಭದ್ರಾವತಿಯ ಸೇಂಟ್ ಮೇರಿಸ್ ಇಂಗ್ಲಿಷ್ ಪ್ರೌಢಶಾಲೆಯ ಚಾರ್ವಿ ಎಂ 620, ಸಾಗರದ ಕ್ರಿಯೇಟಿವಿಟಿ ಇಂಟರ್ ನ್ಯಾಷನಲ್ ಇಂಗ್ಲಿಷ್ ಪ್ರೌಢಶಾಲೆಯ ಪೂರ್ವ ವಿಬಪಟೇಲ್ 620 ಅಂಕ, ಶಿವಮೊಗ್ಗದ ಡಿವಿ ಎಸ್ ಪ್ರೌಢಶಾಲೆಯ ಶಾಂಭವಿ ಕೆ ಪಿ 620 ಅಂಕಗಳು ಪಡೆದಿದ್ದು ಇವರು ಅತಿ ಹೆಚ್ಚು ಅಂಕ ಪಡೆದ ಪ್ರಮುಖ ವಿದ್ಯಾರ್ಥಿಗಳಾಗಿದ್ದಾರೆ.
ಪರೀಕ್ಷೆ ೨ ಕುರಿತು ಪ್ರಮುಖ ಮಾಹಿತಿ:
೨೦೨೫-೨೬ನೇ ಸಾಲಿನ ಪರೀಕ್ಷೆ ೧ರಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾದ ಶಾಲಾ ವಿದ್ಯಾರ್ಥಿಗಳು ಹಾಗೂ ತೃತೀಯ ಭಾಷಾ ವಿಷಯದಲ್ಲಿ ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಬಯಸುವವರಿಗೆ ಮಾತ್ರ ಪರೀಕ್ಷೆ ೨ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಇತರ ವಿಷಯಗಳಲ್ಲಿ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಿ ಪರೀಕ್ಷೆಗೆ ಹಾಜರಾಗಬೇಕಾಗಿದೆ.
ಖಾಸಗಿ ಅಭ್ಯರ್ಥಿಗಳಿಗೆ ಅವಕಾಶ:
೨೦೨೬ನೇ ಸಾಲಿನಲ್ಲಿ ದೀರ್ಘಕಾಲ ಗೈರುಹಾಜರಿಯಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮಾತ್ರ ಹೊಸ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇವರು ಹಿಂದಿನ ಶಾಲೆಯ ಮೂಲಕವೇ ನೋಂದಾಯಿಸಿಕೊಳ್ಳಬೇಕಿದ್ದು, ನಿಗದಿತ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು ಎಂದು ಅಧಿಕಾರಿ ತಿಳಿಸಿದ್ದಾರೆ.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,311 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026395 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026356 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025298 Views
Don't Miss
ಅಪರಾಧ ಲೋಕ

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

By Raghu ShettyJune 13, 20260

ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಶಿವಮೊಗ್ಗ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ…

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.