Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ನಶೆಮುಕ್ತ ಸಮಾಜಕ್ಕಾಗಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು
ಪ್ರಮುಖ ಸುದ್ದಿ

ನಶೆಮುಕ್ತ ಸಮಾಜಕ್ಕಾಗಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು

The role of students is important for a drug-free society.
Raghu ShettyBy Raghu ShettyJune 10, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವ ಸಮುದಾಯದಲ್ಲಿ ಅರಿವು ಮೂಡಿ, ವ್ಯಸನದ ವಿರುದ್ಧ ದೃಢ ನಿಲುವು ರೂಪುಗೊಂಡಾಗ ಮಾತ್ರ ನಶೆಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್. ಸಂತೋಷ್ ಅಭಿಪ್ರಾಯಪಟ್ಟರು.
ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ‘ನಶಾ ಮುಕ್ತ ಭಾರತ’ ಮತ್ತು ಅಂಗದಾನ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ನಾನು ಒಬ್ಬಂಟಿಯಾಗಿದ್ದಾಗ ಹೇಗೆ ವರ್ತಿಸುತ್ತೇನೆ ಎಂಬುದೇ ನನ್ನ ವ್ಯಕ್ತಿತ್ವದ ನಿಜವಾದ ಮಾನದಂಡ. ವ್ಯಕ್ತಿಯ ಜೀವನವು ಅವನ ಚರಿತ್ರೆ ಹಾಗೂ ನಡವಳಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಹಿಂದಿನ ಕಾಲದಲ್ಲಿ ಇಡೀ ಸಮಾಜವೇ ಮಕ್ಕಳ ಬೆಳವಣಿಗೆಗೆ ಮಾರ್ಗದರ್ಶನ ನೀಡುತ್ತಿತ್ತು. ಆದರೆ ಇಂದು ಸಮಾಜದ ರಚನೆ ಮತ್ತು ಮಕ್ಕಳ ಮನಸ್ಥಿತಿ ಎರಡೂ ಬದಲಾಗಿದ್ದು, ಹಿರಿಯರನ್ನು ಗೌರವಿಸುವ ಸಂಸ್ಕಾರ ಹಾಗೂ ಒಳ್ಳೆಯ ಸಲಹೆಗಳನ್ನು ಸ್ವೀಕರಿಸುವ ಮನೋಭಾವ ಕಡಿಮೆಯಾಗುತ್ತಿದೆ” ಎಂದು ಹೇಳಿದರು.
ಮಾದಕ ವಸ್ತುಗಳು ವ್ಯಕ್ತಿಯಲ್ಲಿ ಕ್ರೌರ್ಯ ಹಾಗೂ ಅಮಾನವೀಯ ಪ್ರವೃತ್ತಿಗಳನ್ನು ಹೆಚ್ಚಿಸುತ್ತವೆ. ನಶೆಯ ಅಮಲಿನಲ್ಲಿ ನಡೆಯುವ ಅಪರಾಧಗಳಿಗೆ ಕಾನೂನು ಯಾವುದೇ ಕನಿಕರ ತೋರಿಸುವುದಿಲ್ಲ. ಅಂತಹವರನ್ನು ಮೊದಲು ಅಪರಾಧಿಗಳಾಗಿ ಪರಿಗಣಿಸಿ, ನಂತರ ಅಗತ್ಯವಿದ್ದಲ್ಲಿ ರೋಗಿಗಳಾಗಿ ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಶಿಸ್ತುಬದ್ಧ ಜೀವನ, ಸಾಮಾಜಿಕ ನಡವಳಿಕೆ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತದೆ. ಕುತೂಹಲದಿಂದ ಆರಂಭವಾಗುವ ಮಾದಕ ವಸ್ತುಗಳ ಬಳಕೆ ಕ್ರಮೇಣ ವ್ಯಸನವಾಗಿ ರೂಪುಗೊಂಡು, ವ್ಯಕ್ತಿಯನ್ನು ಸಂಪೂರ್ಣವಾಗಿ ಅದರ ಅವಲಂಬಿತನನ್ನಾಗಿ ಮಾಡುತ್ತದೆ ಎಂದು ಅವರು ಹೇಳಿದರು.
ವಿಶೇಷವಾಗಿ ಫಾರ್ಮಸಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರವಲ್ಲದೆ ಸಮಾಜದ ವಿವಿಧ ವಲಯಗಳಲ್ಲಿಯೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ನಶೆಮುಕ್ತ ವಾತಾವರಣ ನಿರ್ಮಾಣಕ್ಕೆ ಯುವಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎನ್‌ಇಎಸ್ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್, ಸೈಬರ್ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಮಂಜುನಾಥ, ಎನ್‌ಯು ಆಸ್ಪತ್ರೆಯ ನೆಫ್ರಾಲಜಿಸ್ಟ್ ಡಾ. ಪ್ರವೀಣ್ ಮಳವಾಡೆ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಹರ್ಷ ಎಸ್.ಎನ್. ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಲಿಖಿತ ಕಾರ್ಯಕ್ರಮ ನಿರೂಪಿಸಿದ್ದು, ವಿದ್ಯಾರ್ಥಿನಿ ದಿಶಾ ಪ್ರಾರ್ಥಿಸಿದರು.

ಇಂದಿನ ಯುವಜನತೆ ಸರಿಯಾದ ಮಾರ್ಗದರ್ಶನ ಮತ್ತು ವಿವೇಚನೆಯ ಕೊರತೆಯಿಂದ ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ, ಮಾನವೀಯ ಮೌಲ್ಯಗಳು ಮತ್ತು ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳತ್ತ ಹೆಚ್ಚು ಗಮನ ಹರಿಸಬೇಕು
:ಎಸ್.ಎನ್.ನಾಗರಾಜ
ಕಾರ್ಯದರ್ಶಿ, ರಾಷ್ಟ್ರೀಯ ಶಿಕ್ಷಣ ಸಮಿತಿ

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,311 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026391 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026353 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025294 Views
Don't Miss
Home

ಜೂನ್ 16: ಉದ್ಯೋಗ ನೇರ ಸಂದರ್ಶನ

By Raghu ShettyJune 12, 20260

ಶಿವಮೊಗ್ಗ, : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ…

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

June 11, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.