ಸಾಗರ : ತಾಲೂಕಿನ ಆನಂದಪುರದ ಬಸ್ ನಿಲ್ದಾಣ ಮುಂಭಾಗ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಕಾರನ್ನು ನಿಲ್ಲಿಸದೆ ತೆರಳಿರುವ ಘಟನೆ ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆದಿದೆ.
ಇನ್ನು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ತಕ್ಷಣ ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಮಾಡಿ ಕಾರು ನಿಲ್ಲಿಸದೆ ತೆರಳಿದ್ದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Subscribe to Updates
Get the latest creative news from FooBar about art, design and business.
ಮಹಿಳೆಗೆ ಗುದ್ದಿ ಕಾರು ಪರಾರಿ
woman-punched-and-car-fled